ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೈದರಾಬಾದ್‌ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ರಾರ‍ಯಲಿ ನಡೆಸುವ ಮೂಲಕ ಚುನಾವಣೆ ಎದುರಿಸಲು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಮಾ.20ರ ಮಂಗಳವಾರದಿಂದ ಎರಡು ದಿನ ದಕ್ಷಿಣ ಕರಾವಳಿಯಲ್ಲಿ ರಾರ‍ಯಲಿ ನಡೆಸಲಿದ್ದಾರೆ.

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೈದರಾಬಾದ್‌ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ರಾರ‍ಯಲಿ ನಡೆಸುವ ಮೂಲಕ ಚುನಾವಣೆ ಎದುರಿಸಲು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಮಾ.20ರ ಮಂಗಳವಾರದಿಂದ ಎರಡು ದಿನ ದಕ್ಷಿಣ ಕರಾವಳಿಯಲ್ಲಿ ರಾರ‍ಯಲಿ ನಡೆಸಲಿದ್ದಾರೆ.

ಮಾ.20ರಂದು ಮಂಗಳವಾರ ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಅವರು, ಎರಡು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ರಾರ‍ಯಲಿ ನಡೆಸಲಿದ್ದಾರೆ. ಈ ಪ್ರವಾ​ಸದ ವೇಳೆ ಅವರು, ಮಂಗಳೂರಿನಲ್ಲಿ ದೇವಸ್ಥಾನ, ದರ್ಗಾ ಹಾಗೂ ಚಚ್‌ರ್‍ಗೆ ಭೇಟಿ ನೀಡುವ ಮೂಲಕ ಕೋಮು ಸೌಹಾ​ರ್ದ​ತೆಯ ಸಂದೇಶ ನೀಡ​ಲಿ​ದ್ದಾ​ರೆ.

ಮಾ.20ರಂದು ಮಧ್ಯಾಹ್ನ 1 ಗಂಟೆಗೆ ರಾಜೀವ್‌ ಗಾಂಧಿ ರಾಜಕೀಯ ಸಂಸ್ಥೆ ಉದ್ಘಾ​ಟನೆ ಮಾಡ​ಲಿ​ದ್ದು, ಅನಂತರ ತೆಂಕ ಎರ್ಮಾಳ್‌ ಸೇವಾದಳದ ರಾಜ್ಯ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಪಡುಬಿದ್ರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ. ನಂತರ ದಕ್ಷಿಣ ಕನ್ನಡದ ಮೂಲ್ಕಿಯಲ್ಲಿ ಕಾರ್ಯಕರ್ತರಿಂದ ಸ್ವಾಗತ ಕಾರ್ಯಕ್ರಮ ನಡೆ​ಯ​ಲಿದೆ. ಸುರತ್ಕಲ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದಾದ ನಂತರ ಮಂಗಳೂರಿನ ಜ್ಯೋತಿ ವೃತ್ತದಿಂದ ಸಿಗ್ನಲ್‌ ಪಾಯಿಂಟ್‌ವರೆಗೆ ರಾರ‍ಯಲಿ ನಡೆಸಲಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಮಂಗಳೂರು ನಗರದಲ್ಲಿರುವ ಗೋಕರ್ಣನಾಥೇಶ್ವರ ದೇವಸ್ಥಾನ ಹಾಗೂ ರೊಜಾರಿಯೋ ಚಚ್‌ರ್‍, ಉಲ್ಲಾಳ ದರ್ಗಾಗೆ ಭೇಟಿ ನೀಡಿ ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸಮುದಾಯವನ್ನು ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

21ಕ್ಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು:

ಮಾ.21ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ರಾರ‍ಯಲಿ ನಡೆಸಲಿದ್ದು, ಮೊದಲಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ಬಳಿಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಮಂಗಳೂರಿನಿಂದ ಶೃಂಗೇರಿಗೆ ಹೆಲಿಕಾಪ್ಟರ್‌ನಲ್ಲಿ ತೆರಳಿ, ಶೃಂಗೇರಿ ಮಠದ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಲಿ​ದ್ದಾರೆ. ಇದೇ ವೇಳೆ ಶ್ರೀ ಭಾರತಿತೀರ್ಥ ಜಗದ್ಗುರು ಶಂಕರಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿ​ದ್ದಾರೆ. ಇದಾದ ನಂತರ ಶೃಂಗೇರಿ ಮಠದ ರಾಜೀವ್‌ ಗಾಂಧಿ ಸಂಸ್ಕೃತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಇದೇ ವೇಳೆ ಹೊಸದಾಗಿ ನಿರ್ಮಿಸಿರುವ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯ ಉದ್ಘಾಟನೆ ಮಾಡು​ತ್ತಾರೆ. ಬಳಿಕ ಶೃಂಗೇರಿಯಿಂದ ಚಿಕ್ಕಮಗಳೂರಿಗೆ ಹೆಲಿಕಾಪ್ಟರ್‌ ಮೂಲಕ ತೆರಳಿ, ಅಲ್ಲಿ ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೇಲೂರಿನಲ್ಲಿ ಕಾರ್ಯಕರ್ತರಿಂದ ಸ್ವಾಗತ ಕಾರ್ಯಕ್ರಮ ಹಾಗೂ ಹಾಸನದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕೆಪಿ​ಸಿಸಿ ಪ್ರಕ​ಟಣೆ ತಿಳಿ​ಸಿ​ದೆ.