ವೈನಾಡು(ಜೂ.07): ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವೈನಾಡು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಮೂರು ದಿನಗಳ ವೈನಾಡು ಭೇಟಿಗೆ ಮುಂದಾಗಿರುವ ರಾಹುಲ್, ಭರ್ಜರಿ ರೋಡ್ ಶೋ ಮೂಲಕ ಕ್ಷೇತ್ರಕ್ಕೆ ಬಂದಿಳಿದರು. ಈ ವೇಳೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು.

ಇನ್ನು ನಾಳೆ(ಜೂ.08) ಪ್ರಧಾನಿ ಮೋದಿ ಕೇರಳಕ್ಕೆ ಭೇಟಿ ನೀಡಲಿದ್ದು, ಗುರುವಾಯುರು ಶ್ರೀ ಕೃಷ್ಣ ಮಂದಿರದಲ್ಲಿ ಪೂಜೆ ನೆರವೇರಿಸಲಿದ್ದಾರೆ. ಅಲ್ಲದೇ ಮೋದಿ ತ್ರಿಸ್ಸೂರಿನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.