ನವದೆಹಲಿ: ಲೋಕಸಭೆ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಶೋಧಿಸಲ್ಪಟ್ಟ ರಾಜಕಾರಣಿ ಎನಿಸಿಕೊಂಡಿದ್ದಾರೆ. ನಂತರದ ಸ್ಥಾನವನ್ನು ಪ್ರಿಯಾಂಕಾ ಗಾಂಧಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪಡೆದುಕೊಂಡಿದ್ದಾರೆ.

ಅಂತರ್ಜಾಲ ಶೋಧ ತಾಣ ‘ಯಾಹೂ ಇಂಡಿಯಾ’ ಜನರು ಯಾರ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂಬ ದಾಖಲೆಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 

ಮಾಜಿ ಕ್ರಿಕೇಟಿಗ, ರಾಜಕಾರಣಿ ನವ್‌ಜೋತ್ ಸಿಂಗ್ ಸಿಧು ಐದನೇ ಸ್ಥಾನ ಪಡೆದಿದ್ದಾರೆ.