ಕರ್ನಾಟಕದಲ್ಲಿ ಈಗಷ್ಟೇ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಕಣ್ಣು ಬಿಟ್ಟಿದೆ. ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿರಾಂತಕವಾಗಿ ಮುಗಿದು, ಇನ್ನೇನು ಸರ್ಕಾರ ಆಡಳಿತದ ಹಳಿ ಮೇಲೆ ಮತ್ತೆ ಓಡಬೇಕಿದೆ. ಅತ್ತ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮುಂಬರುವ ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಅಲ್ಲಿನ ರೈತರಿಗೆ ಸಂಪೂರ್ಣ ಸಾಲ ಮನ್ನಾದ ಭರವಸೆ ನೀಡಿದ್ದಾರೆ.

ಮಂಡಸೋರ್[ಜೂ.6]: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇವಲ 10 ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ಇಂದು ಮಂಡಸೋರ್ ಜಿಲ್ಲೆಯ ಪಿಪ್ಲಿಯಲ್ಲಿ ಕಳೆದ ವರ್ಷ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟ ರೈತರ ಸ್ಮರ್ಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, ‘ಕಮಲ್ ನಾಥ್(ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ) ಹಾಗೂ ಜ್ಯೋತಿರಾಧಿತ್ಯ ಸಿಂಧ್ಯಾ(ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ) ಸಮ್ಮುಖದಲ್ಲಿ ಹೇಳುತ್ತಿದ್ದೇನೆ, ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ’ ಎಂದು ಘೋಷಣೆ ಮಾಡಿದರು.

Scroll to load tweet…

ಇದೇ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಮೇಲೆ ಗೋಲಿಬಾರ್ ಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ರಾಹುಲ್ ಭರವಸೆ ನೀಡಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಚತ್ತೀಸ್ಗಢದಲ್ಲಿ ಈ ವರ್ಷ ನವೆಂಬರ್ನಲ್ಲಿ ವಿಧಾನಸಭೆ ಚುನವಾಣೆ ನಡೆಯಲಿದೆ.