ಅಯೋಧ್ಯೆ (ಸೆ.09): ಉತ್ತರ ಪ್ರದೇಶದಲ್ಲಿ ಕಿಸಾನ್ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಬಾಬ್ರಿ ಮಸೀದಿ ನೆಲಕ್ಕುರುಳಿದ 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ವ್ಯಕ್ತಿಯೋರ್ವರು ಅಯೋಧ್ಯೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಸುಮಾರು 20 ನಿಮಿಷ ಅಯೋಧ್ಯೆಯಲ್ಲಿದ್ದ ರಾಹುಲ್ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಬಳಿಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ. ಆದರೆ ಇಲ್ಲಿಯ ಹನುಮಾನ್ ಗರ್ವಿ ದೇಗುಲದಲ್ಲಿ ರಾಹುಲ್ ವಿಶೇಷ ಪೂಜೆ ಸಲ್ಲಿಸಿದರು. ಆದರೆ ವಿವಾದಿತ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ತಾಣದಿಂದ ದೂರ ಉಳಿದಿದ್ದಾರೆ. ಬಳಿಕ ಅಂಬೇಡ್ಕರ್ ನಗರದಲ್ಲಿರುವ ಕಿಚೌಚ ಶರೀಫ್ ದರ್ಗಾಗೆ ಭೇಟಿ ನೀಡಿ ಸಮತೋಲನ ಕಾಯ್ದುಕೊಳ್ಳಲು ಯತ್ನಿಸಿದ್ದಾರೆ.