2018ರಲ್ಲಿ ಕೆಲವು ರಾಜ್ಯಗಳಿಗೆ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ  ಚುಕ್ಕಾಣಿ ವಹಿಸಲಿದ್ದಾರೆ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ. ಬಹುತೇಕವಾಗಿ ಈ ವರ್ಷದ ಕೊನೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿ: 2018ರಲ್ಲಿ ಕೆಲವು ರಾಜ್ಯಗಳಿಗೆ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ವಹಿಸಲಿದ್ದಾರೆ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ.

ಬಹುತೇಕವಾಗಿ ಈ ವರ್ಷದ ಕೊನೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಈ ಹಿಂದೆಯೂ ತಾನು ಈ ಕುರಿತು ಹೇಳಿಕೆ ನೀಡಿದ್ದು, ಅವು ತಪ್ಪು ಸಾಬೀತಾಗಿವೆ. ಆದರೆ ಈ ಬಾರಿ ಅದು ಸತ್ಯವಾಗಬಹುದು ಎಂದು ಅವರು ಹೇಳಿದ್ದಾರೆ.

2015ರಲ್ಲಿ ಈ ರೀತಿಯಾಗಬಹುದೆಂದು ನಿರೀಕ್ಷಿಸಿದ್ದೆ, ಆದರೆ ಆಗಲಿಲ್ಲ. 2016ರಲ್ಲೂ ಅದೇ ರೀತಿ ಆಯಿತು. ಆದರೆ 2017ರಲ್ಲಿ ಅದು ಆಗಿಯೇ ತಿರುವುದು ಎಂದು ನನಗನಿಸುತ್ತಿದೆ ಎಂದು ಜೈರಾಮ್ ರಮೇಶ್ ನುಡಿದಿದ್ದಾರೆ.

ಮುಂಬರುವ ವರ್ಷ ವಿಧಾನಸಭೆಗಳಿಗೆ ಚುನಾವಣೆಗಳು ನಡೆಯಲಿವೆ. ಅದರ ಮುಂದಿನ ವರ್ಷ ಲೋಕಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಅನಿಶ್ಚಿತತೆ ಒಳ್ಳಯದಲ್ಲ ಎಂದು ಅವರು ತಮ್ಮ ನಿರೀಕ್ಷೆಯನ್ನು ಸಮರ್ಥಿಸಿಕೊಂಡಿದ್ದಾರೆ.