ರಾಜ್ಯಕ್ಕೆ ಬರಲಿದ್ದಾರೆ ರಾಹುಲ್ ಗಾಂಧಿ

First Published 4, Aug 2018, 11:20 AM IST
Rahul to Visit Karnataka On August 13
Highlights

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದ್ದು  ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದ ಜನರಿಗೆ ಧನ್ಯವಾದ ಹೇಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಾಲುದಾರಿಕೆ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಮತದಾರರಿಗೆ ಕೃತಜ್ಞತೆ ಅರ್ಪಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ. 13 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಆ. 13 ರಂದು ಬೀದರ್‌ನಲ್ಲಿ ಬೃಹತ್ ಸಮಾವೇಶ ವನ್ನು ಕಾಂಗ್ರೆಸ್ ಆಯೋಜಿಸಲಿದ್ದು, ಅದರಲ್ಲಿ ಪಾಲ್ಗೊಳ್ಳಲು ರಾಹುಲ್ ಆಗಮಿಸಲಿದ್ದಾರೆ.

ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಹಲವು ಬಾರಿ ಆಗಮಿಸಿದ್ದ ರಾಹುಲ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗ ಮಿಸಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪಕ್ಷದ ನಾಯಕರ ಸಭೆಯಲ್ಲಿ ಈ ಸಮಾ ವೇಶವನ್ನು ಯಶಸ್ವಿಗೊಳಿಸಲು ನಿರ್ಧರಿಸಲಾಗಿದೆ.

loader