ಮಾರ್ಚ್ ಮೊದಲ ವಾರ ಅವಿಭಜಿತ ದಕ್ಷಿಣ ಕನ್ನಡಕ್ಕೆ ರಾಹುಲ್‌

First Published 15, Feb 2018, 9:02 AM IST
Rahul Visit Dakshin Kannada In March
Highlights

ಹೈದರಾಬಾದ್‌ ಕರ್ನಾಟಕದಲ್ಲಿ ಈಗಾಗಲೇ ಜನಾಶೀರ್ವಾದ ಯಾತ್ರೆಯನ್ನು ಮುಗಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್ ಮೊದಲ ವಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಮಂಗಳೂರು : ಹೈದರಾಬಾದ್‌ ಕರ್ನಾಟಕದಲ್ಲಿ ಈಗಾಗಲೇ ಜನಾಶೀರ್ವಾದ ಯಾತ್ರೆಯನ್ನು ಮುಗಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್ ಮೊದಲ ವಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ನಗರದಲ್ಲಿ ಬುಧವಾರ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್‌, 3-4 ದಿನಗಳ ಕಾಲ ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ರಾಹುಲ್‌ ಗಾಂಧಿ ಅಲ್ಲಲ್ಲಿ ರೋಡ್‌ ಶೋ, ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಅವರು ಬಸ್ಸಿನಲ್ಲೇ ಪ್ರಯಾಣ ಮಾಡಲಿದ್ದು ಅಲ್ಲಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.

ರಾಷ್ಟ್ರಮಟ್ಟದ, ರಾಜ್ಯಮಟ್ಟದ ಅನೇಕ ನಾಯಕರು ಈ ಸಂದರ್ಭ ಅವರ ಜೊತೆ ಸಂಚರಿಸಲಿದ್ದು ಅವರ ಭೇಟಿಯ ಸಂಪೂರ್ಣ ರೂಪುರೇಷೆ ಇನ್ನಷ್ಟೆನಿರ್ಧಾರವಾಗಬೇಕಿದೆ ಎಂದು ವೆಂಕಟೇಶ್‌ ತಿಳಿಸಿದರು.

loader