ಕಾಂಗ್ರೆಸ್ ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು ದೀಪಾವಳಿ ನಂತರ ಯಾವ ದಿನದಲ್ಲಾದರೂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ. ಬಹುತೇಕ ಎಲ್ಲ ರಾಜ್ಯಗಳ ಕಾಂಗ್ರೆಸ್ ಘಟಕಗಳು ರಾಹುಲ್ ಅವರು ಅಧ್ಯಕ್ಷರಾಗಬೇಕೆಂಬ ಏಕಪಕ್ಷೀಯ ನಿರ್ಣಯವನ್ನು ಅಂಗೀಕರಿಸಿವೆ.

ನವದೆಹಲಿ(ಅ.13): ಶೀಘ್ರದಲ್ಲಿಯೇ ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ನೀವು ಹಲವು ವರ್ಷಗಳಿಂದ ಇದೇ ಪ್ರಶ್ನೆ ಪ್ರಶ್ನೆಯನ್ನು ಕೇಳುತ್ತಿದ್ದೀರಿ ಆ ಸಂದರ್ಭ ಈಗ ಈಡೇರಲಿದೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆತ್ಮಕತೆ ಬಿಡುಗಡೆ ಸಮಾರಂಭದಲ್ಲಿ ಮಾಧ್ಯಮವೊಂದು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಕಾಂಗ್ರೆಸ್ ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು ದೀಪಾವಳಿ ನಂತರ ಯಾವ ದಿನದಲ್ಲಾದರೂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ. ಬಹುತೇಕ ಎಲ್ಲ ರಾಜ್ಯಗಳ ಕಾಂಗ್ರೆಸ್ ಘಟಕಗಳು ರಾಹುಲ್ ಅವರು ಅಧ್ಯಕ್ಷರಾಗಬೇಕೆಂಬ ಏಕಪಕ್ಷೀಯ ನಿರ್ಣಯವನ್ನು ಅಂಗೀಕರಿಸಿವೆ.

ಅಕ್ಟೋಬರ್ 25ರೊಳಗೆ ನಾಮ ನಿರ್ದೇಶನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು ದೀಪಾವಳಿ ಮುನ್ನವೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನು ನೇಮಿಸಲಿದೆ. 131 ವರ್ಷಗಳ ತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ 1998ರಲ್ಲಿ ಸೀತಾರಾಂ ಕೇಸರಿ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಸತತ 19 ವರ್ಷಗಳಿಂದ ಸೋನಿಯಾ ಗಾಂಧಿ ಅವರೇ ಅಧ್ಯಕ್ಷರಾಗಿದ್ದಾರೆ.