ರಾಯಚೂರು[ಏ.19]: ರಾಯಚೂರು ಬಿಇ ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ ಹೊಸ ಟ್ವಿಸ್ಟ್ ಪಡೆದಿದೆ. ವಿದ್ಯಾರ್ಥಿನಿ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಆಕೆಯ ಸಾವಿನ ತನಿಖೆ ನಡೆದಸಿ ನ್ಯಾಯ ಒದಗಿಸಿಕೊಡಬೇಕೆಂಬ ಕೂಗು ಜೋರಾಗಿದೆ. 

"

ಒಂದೆಡೆ ತಾಯಿ ತನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಾಯಿ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ ಯಾದವ್ ಎಂಬಾತನನ್ನು ಬಂಧಿಸಿದ್ದಾರೆ.