ದೇಶದಲ್ಲೇ ಅತಿಹೆಚ್ಚು ಜನರಿಗೆ ಉದ್ಯೋಗ ಒದಗಿಸುವ ಭಾರತೀಯ ರೈಲ್ವೆಯ 13 ಲಕ್ಷ ಸಿಬ್ಬಂದಿ ಪೈಕಿ 13 ಸಾವಿರಕ್ಕೂ ಹೆಚ್ಚು ನೌಕರರು ಅನಧಿಕೃತವಾಗಿ ದೀರ್ಘಾವಧಿ ರಜೆಯಲ್ಲಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಂಥ ಸಿಬ್ಬಂದಿಗಳನ್ನು ಹುದ್ದೆಯಿಂದಲೇ ತೆಗೆದುಹಾಕುವ ನಿರ್ಧಾರಕ್ಕೆ ಬಂದಿದೆ.

ನವದೆಹಲಿ: ದೇಶದಲ್ಲೇ ಅತಿಹೆಚ್ಚು ಜನರಿಗೆ ಉದ್ಯೋಗ ಒದಗಿಸುವ ಭಾರತೀಯ ರೈಲ್ವೆಯ 13 ಲಕ್ಷ ಸಿಬ್ಬಂದಿ ಪೈಕಿ 13 ಸಾವಿರಕ್ಕೂ ಹೆಚ್ಚು ನೌಕರರು ಅನಧಿಕೃತವಾಗಿ ದೀರ್ಘಾವಧಿ ರಜೆಯಲ್ಲಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಂಥ ಸಿಬ್ಬಂದಿಗಳನ್ನು ಹುದ್ದೆಯಿಂದಲೇ ತೆಗೆದುಹಾಕುವ ನಿರ್ಧಾರಕ್ಕೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲಾಖೆಯ ಕಾರ್ಯವೈಖರಿಯನ್ನು ಮತ್ತಷ್ಟುಉತ್ತಮಗೊಳಿಸುವ ನಿಟ್ಟಿನಲ್ಲಿ ನೌಕರರು ಶ್ರದ್ಧೆ, ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆಯೇ ಎಂಬುದರ ಪತ್ತೆಗಾಗಿ ರೈಲ್ವೆ ಇಲಾಖೆ ಕಾರ್ಯಾಚರಣೆ ಕೈಗೊಂಡಿತ್ತು. ಇದರ ಭಾಗವಾಗಿ ದೀರ್ಘಾವಧಿ ರಜೆಯಲ್ಲಿರುವ ನೌಕರರನ್ನು ಸೇವೆಯಿಂದ ಕೈಬಿಡಲಾಗುತ್ತದೆ ಎಂದು ಎಚ್ಚರಿಸಲಾಗಿದೆ.