ಕೆಲ ದಿನಗಳ  ಹಿಂದಷ್ಟೆ 90 ಸಾವಿರ ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಿದ್ದ ಭಾರತೀಯ ರೈಲ್ವೆ ಇಲಾಖೆ ಇದೀಗ ಮತ್ತೊಂದು ಭರ್ಜರಿ ನೇಮಕಾತಿಗೆ ಆದೇಶ  ಹೊರಡಿಸಿದೆ.

ನವದೆಹಲಿ : ಕೆಲ ದಿನಗಳ ಹಿಂದಷ್ಟೆ 90 ಸಾವಿರ ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಿದ್ದ ಭಾರತೀಯ ರೈಲ್ವೆ ಇಲಾಖೆ ಇದೀಗ ಮತ್ತೊಂದು ಭರ್ಜರಿ ನೇಮಕಾತಿಗೆ ಆದೇಶ ಹೊರಡಿಸಿದೆ. ಇದೀಗ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಮತ್ತೆ 9500 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ ಆರ್ಪಿಎಫ್ ಕ್ಯಾಟಗರಿ ಅಡಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಇದರಲ್ಲಿ ಶೇ.50ರಷ್ಟು ಮಹಿಳಾ ಮೀಸಲಾತಿ ಇರಲಿದೆ ಎಂದೂ ಕೂಡ ತಿಳಿಸಿದ್ದಾರೆ .