ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಹಲವೆಡೆ ಶನಿವಾರ ಕೂಡ ಗುಡುಗು ಸಹಿತ ಮಳೆ ಯಾಗಿದ್ದು, ತುಮಕೂರಿನ ಕೊರಟಗೆರೆ ಯ ಭೂತನಹಳ್ಳಿಯಲ್ಲಿ ಸಿಡಿಲು ಬಡಿದು ಹನುಮಕ್ಕ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಹಲವೆಡೆ ಶನಿವಾರ ಕೂಡ ಗುಡುಗು ಸಹಿತ ಮಳೆ ಯಾಗಿದ್ದು, ತುಮಕೂರಿನ ಕೊರಟಗೆರೆ ಯ ಭೂತನಹಳ್ಳಿಯಲ್ಲಿ ಸಿಡಿಲು ಬಡಿದು ಹನುಮಕ್ಕ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ.

 ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಮಳೆ ಹಾಗೂ ಹಾವೇರಿ, ಗದಗ, ಧಾರವಾಡ ಸೇರಿದಂತೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳ ಕೆಲವೆಡೆ ಮುಂದಿನ ಒಂದೆರಡು ದಿನಗಳ ಕಾಲ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಮುಂದಿನ ಒಂದೆರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಜತೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ 33ರಿಂದ 42 ಮಿ.ಮೀ.ವರೆಗೆ ಭಾರೀ ಮಳೆ ಬಿದ್ದಿದೆ. ಬೆಂ.ಗ್ರಾಮಾಂತರ ಜಿಲ್ಲೆಯ ಒಂದೆರಡು ಕಡೆ 42 ಮಿ.ಮೀ. ಮಳೆಯಾಗಿದೆ. ಇನ್ನು ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಿವಿಧೆಡೆ ಸಾಧಾರಣ ಮಳೆಯಾಗಿದೆ.