ಇನ್ನೂ ಎರಡು ದಿನ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು: ಇನ್ನೂ ಎರಡು ದಿನ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ನಡುವೆ ಉತ್ತರ ಒಳನಾಡಿನ ಬಿಸಿಲ ಬೇಗೆ ಇನ್ನಷ್ಟು ಹೆಚ್ಚಾಗುತ್ತಿದ್ದು, ಕಲಬುರಗಿಯಲ್ಲಿ ಭಾನುವಾರ 42 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಏರಿಕೆಯಾಗಿದೆ. ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.