Asianet Suvarna News Asianet Suvarna News

ರಾಜ್ಯದ ಈ ಪ್ರದೇಶಗಳಲ್ಲಿ ಸುರಿಯಲಿದೆ ಭಾರೀ ಮಳೆ

ಲೋಕಸಭಾ ಚುನಾವಣೆ ಸಮರದ ಬಿಸಿ ನಡುವೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Rain expected at this places of Karnataka Meteorological department alerts
Author
Bengaluru, First Published Apr 18, 2019, 1:46 PM IST

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ. ಇದರಿಂದ ಬೇಸಿಗೆಯ ಬೇಗೆಗೆ ಕಾವೇರಿದ್ದ ಭೂಮಿಗೆ ತಂಪೆರೆದಿದೆ. ಇಂದು [ಏ.18]  ಸಂಜೆ ವೇಳೆಗೆ ಭಾರೀ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಲೋಕಸಭಾ ಚುನಾವಣೆ ಬಿಸಿ ಇರುವಾಗಲೇ ವರುಣನ ಅಬ್ಬರದ ಬಗ್ಗೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ಒತ್ತಡ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ದಕ್ಷಿಣ ಒಳನಾಡು ಪ್ರದೇಶಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಭಾಗದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

Follow Us:
Download App:
  • android
  • ios