ರಾಜ್ಯಾದ್ಯಂತ ಇನ್ನು ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ.  ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗುವ  ಸಾಧ್ಯತೆಯಿದೆ ಎಂದು ರಾಜ್ಯ  ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ. 

ಬೆಂಗಳೂರು (ಮಾ. 29): ರಾಜ್ಯಾದ್ಯಂತ ಇನ್ನು ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ. 

ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಸೇರಿದಂತೆ ಎಲ್ಲಡೆ ಚದುರಿದ ಮಳೆ ಆಗಲಿದೆ. ಇನ್ನು ಮೂರು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ‌ ಕೂಡ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಲಿದೆ ಎಂದು ಶ್ರೀನಿವಾಸ ರೆಡ್ಡಿ ಸುವರ್ಣ ನ್ಯೂಸ್’ಗೆ ಹೇಳಿದ್ದಾರೆ.