ಬೆಂಗಳೂರಿನಲ್ಲಿ ಇನ್ನು 2- 3 ದಿನ ಮಳೆ

Rain Fall In Bengaluru
Highlights

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಗುರುವಾರ ತುಂತುರು ಹಾಗೂ ಹಗುರ ಮಳೆಯಾಗಿದೆ. ಒಂದೆರಡು ಕಡೆ ಆಲಿಕಲ್ಲು ಸಹಿತ ಮಳೆ ಬಿದ್ದಿದೆ.

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಗುರುವಾರ ತುಂತುರು ಹಾಗೂ ಹಗುರ ಮಳೆಯಾಗಿದೆ. ಒಂದೆರಡು ಕಡೆ ಆಲಿಕಲ್ಲು ಸಹಿತ ಮಳೆ ಬಿದ್ದಿದೆ.

ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಆಲಿಕಲ್ಲು ಸಹಿತ ಮಳೆ ಬಿದ್ದಿದ್ದು, 10 ಮಿ. ಮೀ. ಮಳೆ ದಾಖಲಾಗಿದೆ. ಎಚ್‌ಎಸ್‌ಆರ್ ಲೇಔಟ್, ಕೋರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲವು ನಿಮಿಷಗಳ ಕಾಲ ಉತ್ತಮ ಮಳೆ ಸುರಿದಿದೆ. ಉಳಿದಂತೆ ಬಸವನಗುಡಿಯಲ್ಲಿ 6 ಮಿ.ಮೀ, ಸಾರಕ್ಕಿ 3,ಕೋಣನಕುಂಟೆ 2.5, ಬಂಡಿಕೊಡಿಗೇಹಳ್ಳಿ 3, ಹೆಮ್ಮಿಗೆಪುರ 3, ರಾಜಾನುಕುಂಟೆ 1.5, ಉತ್ತರಹಳ್ಳಿ, ಲಾಲ್‌ಬಾಗ್ ಮತ್ತಿತರ ಕಡೆ ತಲಾ 1 ಮಿ.ಮೀ. ಮಳೆ ದಾಖಲಾಗಿದೆ.

ಅಲ್ಲದೆ, ಟೌನ್‌ಹಾಲ್, ಮುತ್ಸಂದ್ರ, ದೊಮ್ಮಸಂದ್ರ ಸೇರಿದಂತೆ ಹಲವೆಡೆ ತುಂತುರು ಮಳೆ ಬಿದ್ದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ. ಇನ್ನೂ ಎರಡು ದಿನ ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

loader