ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ |  ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ಬೆಂಗಳೂರು (ಮೇ. 08): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬುಧವಾರ ಮತ್ತು ಗುರುವಾರ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಬೆಂಗಳೂರ ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ಮಂಗಳೂರು, ಉಡುಪಿ, ಕಾರವಾರ ಮೊದಲಾದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.