ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗಾಳಿ ಸಹಿತ ಮಳೆಯಾಗಲಿದೆ ಎಂದು ನೈಸರ್ಗಿಕ ಪ್ರಕೋಪ ಕೇಂದ್ರ ತಿಳಿಸಿದೆ.
ಬೆಂಗಳೂರು: ಆಂಧ್ರಪ್ರದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರ್ನಾಲ್ಕು ದಿನ ಗಾಳಿ ಸಹಿತ ಮಳೆಯಾಗಲಿದೆ ಎಂದು ನೈಸರ್ಗಿಕ ಪ್ರಕೋಪ ಕೇಂದ್ರ ತಿಳಿಸಿದೆ. ಕಳೆದ ಕೆಲ ದಿನ ಗಳಿಂದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಯಾಗಿದ್ದರಿಂದ ಉಷ್ಣಾಂಶದಲ್ಲಿ ಏರಿಕೆ ಉಂಟಾಗಿತ್ತು.
ಆದರೆ, ಇದೀಗ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಹಾಗೂ ತೆಲಗಾಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ.
ಇದರ ಪರಿಣಾಮ ಉತ್ತರ ಕರ್ನಾಟಕದ ಗದಗ, ಯಾದಗಿರಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರ್ನಾಲ್ಕು ದಿನ ಗಾಳಿ ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾ ಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್‌ರೆಡ್ಡಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
