ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆಯ ಆರ್ಭಟ

Rain may hit Karnataka for the next four days
Highlights

ಕಳೆದೆರಡು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗರಿಗೆ ವರುಣರಾಯ ತಂಪೆರೆದಿದ್ದಾನೆ. 

ಬೆಂಗಳೂರು[ಮೇ.18]: ಶಿವನಂದ ವೃತ್ತ, ಶಿವಾಜಿ ನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ.

ಕಳೆದೆರಡು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗರಿಗೆ ವರುಣರಾಯ ತಂಪೆರೆದಿದ್ದಾನೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಮೇ 18, 19, 20, 21 ರಂದು ರಾಜ್ಯದ ಹಲವು ಭಾಗದಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಅರಬ್ಬೀ ಸಮುದ್ರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಳೆಯಾಗಲಿದೆ.
ರಾಜ್ಯದ ದಕ್ಷಿಣ ಒಳನಾಡಿನ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಇನ್ನೂ ಮಲೆನಾಡು ಹಾಗೂ ಕರವಾಳಿ ಭಾಗದಲ್ಲಿ ಕೂಡ ಮಳೆಯಾಗಲಿದೆ. ಹಾಗೇ‌ ಬೆಂಗಳೂರುನಲ್ಲಿ ಕೂಡ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ  ತಿಳಿಸಿದ್ದಾರೆ. 

loader