ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ  ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 2019ಕ್ಕೆ  ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ.

ಮುಂಬೈ : ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 2019ಕ್ಕೆ ಮೋದಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸುಳ್ಳು ಭರವಸೆಗಳಿಂದ ದೇಶದ ಜನರು ಬೇಸತ್ತು ಹೋಗಿದ್ದಾರೆ.

ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ಘೋಷಣೆ ಮಾಡುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಎಲ್ಲಾ ವಿಪಕ್ಷಗಳೂ ಕೂಡ ಒಂದಾಗಿ ಮೋದಿ ಮುಕ್ತ ಭಾರತ ನಿರ್ಮಾಣ ಮಾಡಬೇಕು ಎಂದು ಹೇಳಿದರು.