ಮೋದಿ ಮುಕ್ತ ಭಾರತ ನಿರ್ಮಾಣಕ್ಕೆ ರಾಜ್ ಠಾಕ್ರೆ ಕರೆ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕೆಂದು ಕರೆ

ಮುಂಬೈ: ಮೋದಿ ಮುಕ್ತ ಭಾರತ ನಿರ್ಮಾಣಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖಂಡ ರಾಜ್ ಠಾಕ್ರೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಡಿ ಪಾಡ್ವಾ ನಿಮಿತ್ತ ಮುಂಬೈಯ ಶಿವಾಜಿ ಪಾರ್ಕ್’ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ ಠಾಕ್ರೆ, ನಾವಿಂದು ಮೂರನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಿದ್ಧರಾಗಬೇಕಾಗಿದೆ. ಮೋದಿ-ಮುಕ್ತ ಭಾರತವನ್ನು ನಿರ್ಮಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕೆಂದು, ಕರೆ ನೀಡಿದ್ದಾರೆ.

ಸುಮಾರು ಒಂದು ಗಂಟೆ ಮಾತನಾಡಿದ ಠಾಕ್ರೆ, ಕೆಲವರು ಮುಂದಿನ ದಿನಗಳಲ್ಲಿ ದೇಶಾದ್ಯಂತ ಗಲಭೆ ನಡೆಸುವ ಪ್ರಯತ್ನದಲ್ಲಿದ್ದಾರೆ ಎಂದು ಕೂಡಾ ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶದ ಪ್ರಮುಖ 2 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿಯು ಸೋಲುಂಡ ಬಳಿಕ ಪ್ರತಿಪಕ್ಷಗಳ ಪೈಕಿ ಮೈತ್ರಿಯ ಬಗ್ಗೆ ಚರ್ಚೆಗಳು ಗರಿಗೆದರಿವೆ.