ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸೆನ್ಸೇಶನ್ ಹುಟ್ಟು ಹಾಕಿದ್ದಾರೆ. ಭೂಗತ ದೊರೆ ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂತಿರುಗುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ನವದೆಹಲಿ (ಸೆ.21): ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸೆನ್ಸೇಶನ್ ಹುಟ್ಟು ಹಾಕಿದ್ದಾರೆ. ಭೂಗತ ದೊರೆ ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂತಿರುಗುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ವಾಪಸ್ ತರುವ ಮೂಲಕ 2019 ರ ಲೋಕಸಭಾ ಚುನಾವಣೆಯಲ್ಲಿ ಮೈಲೇಜ್ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ರಾಜ್ ಠಾಕ್ರೆ ಆರೋಪಿಸಿದ್ದಾರೆ.
ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂತಿರುಗಲು ಬಯಸುತ್ತಿದ್ದಾರೆ. ಅವರ ಕೊನೆಯ ದಿನಗಳನ್ನು ಇಲ್ಲಿ ಕಳೆಯಲು ಇಷ್ಟಪಡುತ್ತಿದ್ದಾರೆ. ಹಾಗಾಗಿ ಸರ್ಕಾರದ ಜೊತೆ ಸೆಟಲ್'ಮೆಂಟ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ದಾವೂದ್'ರನ್ನು ಭಾರತಕ್ಕೆ ಕರೆತರುವ ಜವಾಬ್ದಾರಿ ನಮ್ಮದು ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. 2019 ರ ಲೋಕಸಭಾ ಚುನಾವಣೆಗೆ ಮೈಲೇಜ್ ತೆಗೆದುಕೊಳ್ಳಲು ಯತ್ನಿಸುತ್ತಿದೆ. ನಾನು ಜೋಕ್ ಮಾಡುತ್ತಿಲ್ಲ. ತದನಂತರ ನಿಮಗೆ ಗೊತ್ತಾಗಲಿದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
