ಹಣದ ಅಪಮೌಲ್ಯೀಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ದ್ವಿಮುಖ ನೀತಿ ತಾಳಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.

ನವದೆಹಲಿ (ನ.19): ಹಣದ ಅಪಮೌಲ್ಯೀಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ದ್ವಿಮುಖ ನೀತಿ ತಾಳಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.

ಹಣದ ಅಪಮೌಲ್ಯೀಕರಣದಿಂದ ಕಪ್ಪುಹಣ ಹೊರ ಬರುತ್ತದೆ ಎಂದು ಮೋದಿ ಘೋಷಿಸಿದ್ದರು. ಆದರೆ ಬಿಜೆಪಿಯ ಜನಾರ್ಧನ ರೆಡ್ಡಿ ತಮ್ಮ ಮಗಳ ಮದುವೆಗೆ 500 ಕೋಟಿಯನ್ನು ಖಾಲಿ ಮಾಡಿದ್ದಾರೆ. ಇದು ಹೇಗೆ ಸಾಧ್ಯವಾಯಿತು ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.

ನೋಟು ನಿಷೇಧದಿಂದ ಜನರು ದಂಗೆಯೇಳುವ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡಾ ಕಳವಳ ವ್ಯಕ್ತಪಡಿಸಿದೆ. ನಾನು ಕೂಡ ಈ ಅಭಿಪ್ರಾಯವನ್ನು ಬೆಂಬಲಿಸುತ್ತೇನೆ. 500 ಹಾಗೂ 1000 ರೂ ನಿಷೇಧದಿಂದ ನಾವು ಇಪ್ಪತ್ತೈದು ವರ್ಷ ಹಿಂದಕ್ಕೆ ಸರಿಯಲಿದ್ದೇವೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.