ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ.
ಚೆನ್ನೈ (ಡಿ.31): ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಇಷ್ಟು ದಿನಗಳ ಕಾಲ ರಾಜಕೀಯಕ್ಕೆ ಪ್ರವೇಶ ಮಾಡುವ ಬಗ್ಗೆ ಹೇಳಿಕೆ ನೀಡಿದ್ದ ಅವರು ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈ ಮೂಲಕ ತಮಿಳುನಾಡಿನಲ್ಲಿ ತಮ್ಮ ರಾಜಕೀಯವನ್ನು ರಜನಿ ಆರಂಭ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಮಿಳುನಾಡಿದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯವಿದೆ. ತಮಗೆ ಜನರ ಮೇಲೆ ಸಂಪೂರ್ಣವಾದ ವಿಶ್ವಾಸವಿದೆ. ಅಭಿಮಾನಿಗಳು ಜನರ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಈ ವೇಳೆ ಅಭಿಮಾನಿಗಳು ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜಕೀಯದಲ್ಲಿ ಹೊಸ ಪರ್ವವೊಂದನ್ನು ಆರಂಭ ಮಾಡುತ್ತಿದ್ದಾರೆ.
