ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಲಾಲ್ ಸೈನಿ ಇನ್ನಿಲ್ಲ| ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮದನ್ ಲಾಲ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನವದೆಹಲಿ/ಜೈಪುರ, [ಜೂ.24]: ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯರಾಗಿದ್ದ ಮದನ್ ಲಾಲ್ ಸೈನಿ ನಿಧನರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ 75 ವರ್ಷ ಮದನ್ ಲಾಲ್ ಸೈನಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮೊದಲು ಚಿಕಿತ್ಸೆಗಾಗಿ ಜೈಪುರದ ಮಾಲ್ವಿಯಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮದನ್ ಅವರ ಪರಿಸ್ಥಿತಿ ಗಂಭೀರಗೊಂಡಿದ್ದರಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
