ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಸಚಿವ

First Published 16, Feb 2018, 10:30 AM IST
Rajasthan Minister Urinating On Jaipur Walls
Highlights

ರಾಜಸ್ಥಾನ ಆರೋಗ್ಯ ಸಚಿವ ಕಾಳಿಚರಣ್ ಸರಾಫ್ ಅವರು ಜೈಪುರದ ಗೋಡೆಗಳ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋವೊಂದು ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ.

ಜೈಪುರ: ರಾಜಸ್ಥಾನ ಆರೋಗ್ಯ ಸಚಿವ ಕಾಳಿಚರಣ್ ಸರಾಫ್ ಅವರು ಜೈಪುರದ ಗೋಡೆಗಳ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋವೊಂದು ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ.

ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ನಗರವನ್ನು ಸ್ವಚ್ಛ ಭಾರತ ಅಭಿಯಾನದ ಅಗ್ರ ನಗರಗಳ ಪಟ್ಟಿಯಲ್ಲಿ ತರುವ ನಿಟ್ಟಿನಲ್ಲಿ ಯತ್ನಿಸುತ್ತಿರುವಾಗಲೇ, ಸಚಿವರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಚಿತ್ರ ಹರಿದಾಡುತ್ತಿದೆ.

loader