ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧವನ್ನು ಇನ್ನಷ್ಟು ಉತ್ತುಂಗಕ್ಕೆ ಏರಿಸುವ ನಿಟ್ಟಿನಲ್ಲಿ ರಾಜಸ್ಥಾನದ ಹಳ್ಳಿಯೊಂದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹೆಸರಿಡಲು ನಿರ್ಧರಿಸಲಾಗಿದೆ.

ವಾಷಿಂಗ್ಟನ್‌: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧವನ್ನು ಇನ್ನಷ್ಟು ಉತ್ತುಂಗಕ್ಕೆ ಏರಿಸುವ ನಿಟ್ಟಿನಲ್ಲಿ ರಾಜಸ್ಥಾನದ ಹಳ್ಳಿಯೊಂದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹೆಸರಿಡಲು ನಿರ್ಧರಿಸಲಾಗಿದೆ.

ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಲಭ್‌ ಶೌಚಾಲಯದ ಸಂಸ್ಥಾಪಕ ಬಿಂದೇಶ್ವರ್‌ ಪಾಠಕ್‌, ರಾಜಸ್ಥಾನದ ಮೇವತ್‌ ವಲಯದ ಹಳ್ಳಿಯೊಂದನ್ನು ಟ್ರಂಪ್‌ ವಿಲೇಜ್‌ ಎಂದು ಹೆಸರಿಸಲಾಗುವುದು ಎಂದು ಹೇಳಿದ್ದಾರೆ.

ಆದರೆ ಇಂಥ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ರಾಜಸ್ಥಾನದ ಅಧಿಕಾರಿಗಳು ಹೇಳಿದ್ದಾರೆ.