ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಸೇರಿದಂತೆ, ಹಿಂದು ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಬಿಜೆಪಿ ಹೋರಾಟ ಮುಂದುವರಿದಿದೆ. 

ಬೆಂಗಳೂರು (ಡಿ.12): ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಸೇರಿದಂತೆ, ಹಿಂದು ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಬಿಜೆಪಿ ಹೋರಾಟ ಮುಂದುವರಿದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಇಂದು ರಾಜಭವನ ಚಲೋಗೆ ಮುಂದಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಿಂದ ರಾಜಭವನದವರೆಗೆ ಮೆರವಣಿಗೆ ಮಾಡೋ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲು ಬಿಜೆಪಿ ತಿರ್ಮಾನ ಮಾಡಿದೆ. ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಬಿಜೆಪಿಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಮತ್ತು ಬಿಬಿಎಂಪಿ ಸದಸ್ಯರಲ್ಲದೇ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಯಿಂದ ಮೆರವಣಿಗೆ ಆರಂಭವಾಗಲಿದ್ದು, ಮೆರವಣಿಗೆಯ ಬಳಿಕ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಾನೂನು ಸುವ್ಯವಸ್ಥೆ ಹದಗೆಡುವ ಘಟನೆಗಳನ್ನು ರಾಜ್ಯಪಾಲರಿಗೆ ವಿವರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.