ನವದೆಹಲಿ(ಸೆ.26): ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಆಧಾರ್ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜೀವ್ ಚಂದ್ರಶೇಖರ್, ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆಧಾರ್ ಮಾಹಿತಿಯಲ್ಲಿ ಪಾರದರ್ಶಕತೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದರ ಫಲವೇ ಇಂದಿನ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಎಂದು ರಾಜೀವ್ ಬಣ್ಣಿಸಿದ್ದಾರೆ.

ಭ್ರಷ್ಟಾಚಾರ ತಡೆಯುವಲ್ಲಿ ಮತ್ತು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಮೋದಿ ಸರ್ಕಾರ, ಆಧಾರ್ ಕಡ್ಡಾಯ ಯೋಜನೆಯನ್ನು ಜಾರಿಗೆ ತಂದಿತ್ತು. ಅದರಂತೆ ಸುಪ್ರೀಂ ಕೋರ್ಟ್ ಕೂಡ ಕೇಂದ್ರದ ನಿರ್ಧಾರಕ್ಕೆ ಸಹಮತ ಸೂಚಿಸಿದೆ ಎಂದು ಸಂಸದರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಧಾರ್ ಕುರಿತಂತೆ ಸುಪ್ರೀಂ ತೀರ್ಪು ಕಾಂಗ್ರೆಸ್ ಪಕ್ಷದ ಸುಳ್ಳುಗಳನ್ನು ದೇಶದ ಜನತೆಯ ಮುಂದಿರಿಸಿದ್ದು, ದೇಶದ ಭದ್ರತೆ ವಿಷಯದಲ್ಲಿ ಕಾಂಗ್ರೆಸ್ ಎಷ್ಟು ಉದಾಸಿನ ಧೋರಣೆ ಹೊಂದಿದೆ ಎಂಬುದು ಇಂದು ಸಾಬೀತಾಗಿದೆ ಎಂದು ರಾಜೀವ್ ಹೇಳಿದ್ದಾರೆ.

ಇದೇ ವೇಳೆ ಭ್ರಷ್ಟಾಚಾರ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಅಗತ್ಯವಿದ್ದು, ದೇಶದ ಜನ ಒಂದಾಗಿ ಮೋದಿ ಅವರ ಬೆಂಬಲಕ್ಕೆ ನೀಲ್ಲಬೇಕಿದೆ. ಅಧಿಕಾರಕ್ಕಾಗಿ ದೇಶದ ಭದ್ರತೆಯನ್ನೇ ಒತ್ತೆ ಇಡುತ್ತಿರುವ ಕಾಂಗ್ರೆಸ್ ನ್ನು ದೇಶದ ಜನ ತಿರಸ್ಕರಿಸಬೇಕು ಎಂದು ರಾಜೀವ್ ಚಂದ್ರಶೇಖರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಆಧಾರ್ ಸಾಂವಿಧಾನಿಕ ಮಹತ್ವ ಏನು, ಎತ್ತ? ಎಲ್ಲರ ಚಿತ್ತ ಸುಪ್ರೀಂನತ್ತ

ಆಧಾರ್ ಮಾನ್ಯತೆ ಎತ್ತಿ ಹಿಡಿದ ಸುಪ್ರೀಂ: ಕೆಲವು ಷರತ್ತು ಅನ್ವಯ!

ಆಧಾರ್ ಜಡ್ಜಮೆಂಟ್: ನಿಮ್ಮ ಮೊಬೈಲ್‌ಗೆ ಮಸ್ತ್ ಟ್ರೀಟ್‌ಮೆಂಟ್!

ಆಧಾರ್ ಯಾವುದಕ್ಕೆಲ್ಲಾ ಕಡ್ಡಾಯ?: ನೋಡ್ಕೊಂಡ್ ಬಿಡಿ!