ಬೆಂಗಳೂರು(ಸೆ. 08): ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಲು ರಾಜ್ಯ ಸರಕಾರವೇ ಕಾರಣ ಎಂದು ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ದೂರಿದ್ದಾರೆ. ಸರಿಯಾದ ಕಾನೂನು ಕಾರ್ಯತಂತ್ರವಿಲ್ಲದೇ ಸುಪ್ರೀಂಕೋರ್ಟ್'ನಲ್ಲಿ ರಾಜ್ಯಕ್ಕೆ ಸೋಲುಂಟಾಗಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ರಾಜೀವ್ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂಕೋರ್ಟ್ ಆದೇಶದಿಂದ ಹಿನ್ನಡೆಯುಂಟಾಗಿರುವ ಎಲ್ಲ ರೈತರಿಗೂ ಮುಖ್ಯಮಂತ್ರಿಗಳು ಕೂಡಲೇ ತತ್'ಕ್ಷಣದ ಪರಿಹಾರ ಘೋಷಣೆ ಮಾಡಬೇಕು. ಹಾಗೂ ಕಾವೇರಿ ನೀರನ್ನು ರೈತರಿಗೆ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸಂಸದರು ಆಗ್ರಹಿಸಿದ್ದಾರೆ.
ರೈತರಿಗೆ ತತ್'ಕ್ಷಣದ ಹಣಕಾಸು ಪರಿಹಾರ ಘೋಷಿಸಬೇಕು: ಸಿಎಂಗೆ ಸಂಸದ ರಾಜೀವ್ ಚಂದ್ರಶೇಖರ್ ಆಗ್ರಹ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
