ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ 19ನೇ ಘಟಿಕೋತ್ಸವ ಸಮಾರಂಭ ನಿಮ್ಹಾನ್ಸ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಪ್ರೊಫೆಸರ್ ಡಾ. ಕೆ.ಜಿ ದಾಸ್ ಹಾಗೂ ಹೃದ್ರೋಗ ತಜ್ಞ ಡಾ. ಗೋವಿಂದರಾಜ್ ಸುಬ್ರಮಣಿಯವರಿಗೆ ಡಾಕ್ಟರ್ ಆಫ್ ಸೈನ್ಸ್ ಪದವಿ ಪ್ರದಾನ ಮಾಡಲಾಯಿತು.
ಬೆಂಗಳೂರು (ಏ.06): ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ 19ನೇ ಘಟಿಕೋತ್ಸವ ಸಮಾರಂಭ ನಿಮ್ಹಾನ್ಸ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಪ್ರೊಫೆಸರ್ ಡಾ. ಕೆ.ಜಿ ದಾಸ್ ಹಾಗೂ ಹೃದ್ರೋಗ ತಜ್ಞ ಡಾ. ಗೋವಿಂದರಾಜ್ ಸುಬ್ರಮಣಿಯವರಿಗೆ ಡಾಕ್ಟರ್ ಆಫ್ ಸೈನ್ಸ್ ಪದವಿ ಪ್ರದಾನ ಮಾಡಲಾಯಿತು.
ರಾಜ್ಯಪಾಲ ವಜುಭಾಯಿ ವಾಲಾ 69 ವಿದ್ಯಾರ್ಥಿಗಳಿಗೆ 103 ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು. ದಾವಣಗೆರೆಯ ಜೆ ಜೆ ಎಮ್ ಮೆಡಿಕಲ್ ಕಾಲೇಜಿನ ಡಾ. ದೀಪ್ತಿ ಅಗರವಾಲ್, ಧರ್ಮಸ್ಥಳ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಡಾ. ಬಿ.ಎನ್ ಸ್ವಾತಿಮುತ್ತು ಐದು ಚಿನ್ನದ ಪದಕ ಗಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ವಜುಭಾಯಿ ರುಡಭಾಯಿ ವಾಲಾ ,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ.ಕೆ.ಎಸ್.ರವೀಂದ್ರ ನಾಥ್ ಸೇರಿದಂತೆ ಹಲವು ಗಣ್ಯರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.
