ಸಂಕಷ್ಟದಲ್ಲಿ ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್| ಬಂಧನದಿಂದ ಸುರಕ್ಷತೆ ಆದೇಶ ಹಿಂಪಡೆದ ಸುಪ್ರೀಂಕೋರ್ಟ್| ಶಾರದಾ ಚಿಟ್ ಫಂಡ್ ಹಗರಣದ ಸಾಕ್ಷ್ಯ ನಾಶಪಡಿಸಿದ ಗಂಭೀರ ಆರೋಪ| ಐಪಿಎಸ್ ಅಧಿಕಾರಿಗೆ ಇದೀಗ ಮತ್ತೆ ಬಂಧನ ಭೀತಿ| ಯಾವುದೇ ಕ್ಷಣದಲ್ಲಿ ರಾಜೀವ್ ಕುಮಾರ್ ಬಂಧನ ಸಾಧ್ಯತೆ|

ನವದೆಹಲಿ(ಮೇ.17): ಮಹತ್ವದ ಬೆಳವಣಿಗೆಯೊಂದರಲ್ಲಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ನೀಡಲಾಗಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಸುಪ್ರೀಂಕೋರ್ಟ್ ತೆರುವು ಗೊಳಿಸಿದೆ. 

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀವ್ ಕುಮಾರ್ ವಿರುದ್ಧ ಸಾಕ್ಷ್ಯ ನಾಶಪಡಿಸಿದ ಗಂಭೀರ ಆರೋಪವಿದ್ದು, ಐಪಿಎಸ್ ಅಧಿಕಾರಿಗೆ ಇದೀಗ ಮತ್ತೆ ಬಂಧನ ಭೀತಿ ಎದುರಾಗಿದೆ.

Scroll to load tweet…

ಈ ಮೊದಲು ರಾಜೀವ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲು ಸಿಬಿಐ ಅಧಿಕಾರಿಗಳು ಕೋಲ್ಕತ್ತಾಗೆ ತೆರಳಿದ್ದಾಗ, ಅವರನ್ನೇ ಕೋಲ್ಕತ್ತಾ ಪೊಲೀಸರು ಬಂಧಿಸುವ ಮೂಲಕ ಹೈಡ್ರಾಮಾ ಸೃಷ್ಟಿಯಾಗಿತ್ತು. ಅಲ್ಲದೇ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆರೋಪಿಸಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಧರಣಿ ಕುಳಿತಿದ್ದರು. 

ಇದೀಗ ಸಿಬಿಐ ವಾದಕ್ಕೆ ಮನ್ನಣೆ ನೀಡಿರುವ ಸುಪ್ರೀಂಕೋರ್ಟ್, ಈ ಹಿಂದೆ ನೀಡಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಸಿಬಿಐ ಅಧಿಕಾರಿಗಳು ರಾಜೀವ್ ಕುಮಾರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.