ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ನಟ ರಜಿನಿಕಾಂತ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ. 

ಚೆನ್ನೈ: ದೇಶದಲ್ಲಿ ರಾಜ್ಯ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲಕ್ಕೆ ನಡೆಯಬೇಕೆಂಬ ವಿಚಾರಕ್ಕೆ ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜಕೀಯ ಪ್ರವೇಶಕ್ಕೆ ತುದಿಗಾಲಲ್ಲಿ ನಿಂತಿರುವ ರಜನೀಕಾಂತ್ ಅವರು ಭಾನುವಾರ ಮಾಧ್ಯಮಗಳೊಂದಿಗೆ ಈ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಜನೀಕಾಂತ್, ‘ದೇಶದಲ್ಲಿ ಒಮ್ಮೆಗೇ ಚುನಾವಣೆಗಳು ನಡೆಯುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ,’ ಎಂದು ಪ್ರತಿಪಾದಿಸಿದರು. 

ಅಲ್ಲದೆ, ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ವೆಚ್ಚದ ಗ್ರೀನ್‌ಫೈಲ್ಡ್ ಚೆನ್ನೈ-ಸೇಲಂ ಅಷ್ಟಪಥದ ಹೆದ್ದಾರಿ ನಿರ್ಮಾಣ ವಾಗಬೇಕು ಎಂದು ಅವರು ಇದೇ ವೇಳೆ ಹೇಳಿದರು.