‘ಇತ್ತೀಚಿನ ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ತಲುಪಿದ್ದು, ನಾವು ಆ ಪಕ್ಷದ ಅಂತ್ಯಕ್ರಿಯೆ ನೆರವೇರಿಸುತ್ತೇವೆ'- ಸುಬ್ರಮಣಿಯನ್ ಸ್ವಾಮಿ

ಪಟನಾ(ಮಾ.26): ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಕುಟುಂಬದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮಾತ್ರವೇ ಒಳ್ಳೆಯ ಮಾನವತಾವಾದಿ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಹಿಂದೂಗಳ ಜಾಗೃತಿಗಾಗಿ ಅವರು ಮಾತ್ರವೇ ಕೊಡುಗೆ ನೀಡಿದ್ದರು ಎಂಬುದಾಗಿಯೂ ಅವರು ತಿಳಿಸಿದ್ದಾರೆ.

ಈ ಬಗ್ಗೆ ಅಯೋಧ್ಯೆ ಕುರಿತು ಉಪನ್ಯಾಸದ ಬಳಿಕ ಮಾತನಾಡಿದ ಅವರು, ‘ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಪ್ರಸಿದ್ಧ ಪೌರಾಣಿಕ ರಾಮಾಯಣದ ಧಾರವಾಹಿಯನ್ನು ದೂರದರ್ಶನದಲ್ಲಿ ಪ್ರಸಾರಕ್ಕೆ ಮತ್ತು ಅಯೋಧ್ಯೆಯಲ್ಲಿರುವ ರಾಮ ಮಂದಿರದ ಬೀಗ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟರು,’ ಎಂದು ರಾಜೀವ್ ಅವರನ್ನು ಕೊಂಡಾಡಿದರು.

‘ಇತ್ತೀಚಿನ ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ತಲುಪಿದ್ದು, ನಾವು ಆ ಪಕ್ಷದ ಅಂತ್ಯಕ್ರಿಯೆ ನೆರವೇರಿಸುತ್ತೇವೆ,’ ಎಂದು ಕಾಂಗ್ರೆಸ್‌'ಗೆ ತಿವಿದಿದ್ದಾರೆ.