2013ರಲ್ಲಿ ಅರುಂಧತಿ ಭಟ್ಟಾಚಾರ್ಯ ಅವರು ಎಸ್‌'ಬಿಐನ ಮೊದಲ ಮಹಿಳಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.
ನವದೆಹಲಿ(ಅ.05): ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್'ಬಿಐ) ಮುಖ್ಯಸ್ಥರಾಗಿ ರಜನೀಶ್ ಕುಮಾರ್ ನೇಮಕಗೊಂಡಿದ್ದಾರೆ.
ಈವರೆಗೆ ಎಸ್'ಬಿಐನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಜನೀಶ್ ಅ.7ರಿಂದ 3 ವರ್ಷಗಳ ಅಧಿಕಾರಾವಧಿ ಹೊಂದಿರುತ್ತಾರೆ. 2013ರಲ್ಲಿ ಅರುಂಧತಿ ಭಟ್ಟಾಚಾರ್ಯ ಅವರು ಎಸ್'ಬಿಐನ ಮೊದಲ ಮಹಿಳಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.
3 ವರ್ಷಗಳ ಅವರ ಅಧಿಕಾರಾವಧಿ ಕಳೆದ ವರ್ಷವೇ ಮುಕ್ತಾಯವಾಗಿತ್ತು. ಆದರೆ, 5 ಸಹವರ್ತಿ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದ ಕಾರಣ ಅರುಂಧತಿ ಅವರ ಸೇವಾವಧಿಯನ್ನು 1 ವರ್ಷ ವಿಸ್ತರಿಸಲಾಗಿತ್ತು.
