ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಲ್ಲ. ಕಡೇ ಕ್ಷಣ ನಿರ್ಧಾರ ಕೈಗೊಳ್ಳುವ ಸಂಪ್ರದಾಯವನ್ನು ಕಾಂಗ್ರೆಸ್‌ ಹೈಕಮಾಂಡ್‌ ಈ ಬಾರಿಯೂ ಮುಂದುವರಿಸಿದ್ದು, ಸಿಂಗಾಪುರದಿಂದ ಪಕ್ಷಾಧ್ಯಕ್ಷ ರಾಹುಲ್‌ ಗಾಂಧಿ ಭಾನುವಾರ ತಡರಾತ್ರಿ ಮರಳಿದ ಬಳಿಕ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಅಂತಿಮಗೊಳಿಲ್ಲ. ಕಡೇ ಕ್ಷಣ ನಿರ್ಧಾರ ಕೈಗೊಳ್ಳುವ ಸಂಪ್ರದಾಯವನ್ನು ಕಾಂಗ್ರೆಸ್ ಹೈಕಮಾಂಡ್ ಈ ಬಾರಿಯೂ ಮುಂದುವರಿಸಿದ್ದು, ಸಿಂಗಾಪುರದಿಂದ ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ತಡರಾತ್ರಿ ಮರಳಿದ ಬಳಿಕ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಯಾರಾರಯರ ಮೈತ್ರಿ?
ಪಶ್ಚಿಮ ಬಂಗಾಳ: ಕಾಂಗ್ರೆಸ್ನ ಸಿಂಘ್ವಿಗೆ ತೃಣಮೂಲ ಬೆಂಬಲ
ಉತ್ತರ ಪ್ರದೇಶ: ಬಿಎಸ್ಪಿ ಅಭ್ಯರ್ಥಿಗೆ ಕಾಂಗ್ರೆಸ್ ಸಹಕಾರ
ಉತ್ತರ ಪ್ರದೇಶ: ಬದ್ಧವೈರಿಗಳಾದ ಬಿಎಸ್ಪಿ, ಎಸ್ಪಿ ಮೈತ್ರಿ
ಮಧ್ಯಪ್ರದೇಶ: ಕಾಂಗ್ರೆಸ್ನ ಅಭ್ಯರ್ಥಿಗೆ ಬಿಎಸ್ಪಿ ಬೆಂಬಲ
ಜಾರ್ಖಂಡ್: ಕಾಂಗ್ರೆಸ್ ಬೆಂಬಲಿಸಲು ಜೆಎಂಎಂ ನಿರ್ಧಾರ
ಅಸ್ಸಾಂ: ಬದ್ರುದ್ದೀನ್ ಪಕ್ಷಕ್ಕೆ ಸಹಕಾರ ನೀಡಲಿದೆ ಕಾಂಗ್ರೆಸ್
ನವದೆಹಲಿ: 2014ರ ಲೋಕಸಭಾ ಚುನಾವಣೆಯ ಅಭೂತಪೂರ್ವ ಗೆಲುವು ಮತ್ತು ನಂತರದಲ್ಲಿ 18 ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಐತಿಹಾಸಿಕ ಗೆಲುವಿನ ಮೂಲಕ ಒಟ್ಟಾರೆ 21 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಮತ್ತು ಅದರ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಬ್ರೇಕ್ ಹಾಕಲು ವಿಪಕ್ಷಗಳು ಸದ್ದಿಲ್ಲವೇ ಒಂದಾಗುವ ಲಕ್ಷಣಗಳು ಕಂಡುಬಂದಿವೆ. ಇದಕ್ಕೆ ಶೀಘ್ರದಲ್ಲೇ ನಡೆಯಲಿರುವ ರಾಜ್ಯಸಭಾ ಚುನಾವಣೆಯೇ ವೇದಿಕೆಯಾಗುವ ಸುಳಿವು ಕಂಡುಬಂದಿವೆ.
ಮುಂಬರುವ ಲೋಕಸಭಾ ಚುನಾವಣೆ ವೇಳೆ ಜಾತ್ಯತೀತ ಪಕ್ಷಗಳು ತಮ್ಮ ಉಳಿವಿಗಾಗಿ ಪರಸ್ಪರ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂಬ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರ ಇತ್ತೀಚಿನ ಹೇಳಿಕೆಯ ಬೆನ್ನಲ್ಲೇ, ಇದುವರೆಗೆ ಪರಸ್ಪರ ದೂರವೇ ಇದ್ದ ಹಲವು ರಾಷ್ಟ್ರೀಯ ಮತ್ತು ಸ್ಥಳೀಯ ಪಕ್ಷಗಳು ಬಿಜೆಪಿ ವಿರುದ್ಧ ಒಂದಾಗುವ ಮನಸ್ಸು ಮಾಡಿವೆ. ಇದು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ತೃತೀಯ ರಂಗ ರಚನೆಯ ಸಾಧ್ಯತೆ ದಟ್ಟವಾಗುವಂತೆ ಮಾಡಿದೆ. ವಿಶೇಷವೆಂದರೆ ಈ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ತೃತೀಯ ರಂಗ ರಚನೆಯಾಗುತ್ತಿದ್ದರೆ, ಈ ಬಾರಿ ಕಾಂಗ್ರೆಸ್ ನೇತೃತ್ವದಲ್ಲೇ ಇಂಥದ್ದೊಂದು ರಚನೆಯಾದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.
ಮುಂಬರುವ ರಾಜ್ಯಸಭಾ ಚುನಾವಣೆ ವೇಳೆ ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಅಥವಾ ತಮ್ಮ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪರಸ್ಪರ ಅಭ್ಯರ್ಥಿಗಳನ್ನು ಬೆಂಬಲಿಸಲು ಹಲವು ವಿಪಕ್ಷಗಳು ಮುಂದಾಗಿರುವ ಇಂಥ ಹೊಸ ಮೈತ್ರಿಕೂಟ ರಚನೆ ಸಾಧ್ಯತೆಯನ್ನು ದಟ್ಟವಾಗಿಸಿದೆ. ಉದಾಹರಣೆಗೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರನ್ನು ಬೆಂಬಲಿಸಿ ಆಯ್ಕೆ ಮಾಡಲು ನಿರ್ಧರಿಸಿದೆ. ಮತ್ತೊಂದೆಡೆ ಉತ್ತರಪ್ರದೇಶದಲ್ಲಿ ಬಿಎಸ್ಪಿ ಅಭ್ಯರ್ಥಿಯನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದ್ದರೆ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿಎಸ್ಪಿ ಬೆಂಬಲ ಘೋಷಿಸಿದೆ. ಅಷ್ಟೇ ಏಕೆ ಪರಸ್ಪರ ಹಾವು ಮುಂಗುಸಿಯಂತೆ ಕಚ್ಚಾಡುವ ಬಿಎಸ್ಪಿ ಮತ್ತು ಎಸ್ಪಿ ಕೂಡಾ ರಾಜ್ಯಸಭೆ ಮತ್ತು ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿಯ ಸುಳಿವು ನೀಡಿದೆ.
ಇನ್ನು ಜಾರ್ಖಂಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಜಾರ್ಖಂಡ್ ಮುಕ್ತಿ ಮೋರ್ಚಾ ಸಮ್ಮತಿಸಿದೆ. ಇನ್ನು ಅಸ್ಸಾಂನಲ್ಲಿ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಆಲ್ ಇಂಡಿಯಾ ಡೆಮಾಕ್ರೆಟಿಕ್ ಫ್ರಂಟ್ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದೆ. ಹೀಗೆ ಹಲವು ವಿಪಕ್ಷಗಳು ಪರಸ್ಪರರಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ 2019ರ ಲೋಕಸಭಾ ಚುನಾವಣೆಗೆ ದೊಡ್ಡ ಮೈತ್ರಿಕೂಟ ಸ್ಥಾಪನೆಗೆ ಈಗಲೇ ವೇದಿಕೆ ಸಿದ್ಧಪಡಿಸಲು ಆರಂಭಿಸಿವೆ.
ಇದೆಲ್ಲದರ ನಡುವೆಯೇ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾ.13ಕ್ಕೆ ದೆಹಲಿಯಲ್ಲಿ 14 ವಿಪಕ್ಷಗಳ ನಾಯಕರ ಸಭೆಯೊಂದನ್ನು ಕರೆÜದಿದ್ದಾರೆ. ಇದು ಕೂಡಾ 2019ರ ಲೋಕಸಭಾ ಚುನಾವಣೆಗೂ ಮುನ್ನ ವಿಪಕ್ಷಗಳನ್ನು ಒಗ್ಗೂಡಿಸುವ ತಂತ್ರದ ಮೊದಲ ಹೆಜ್ಜೆ ಎಂದೇ ಪರಿಗಣಿಸಲಾಗಿದೆ. ಇಂಥದ್ದೊಂದು ರಂಗ ರಚನೆಗೆ ಇತ್ತೀಚೆಗಷ್ಟೇ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮತ್ತು ಎನ್ಸಿಪಿ ನಾಯಕ ಶರದ್ ಪವಾರ್ ಬಹಿರಂಗವಾಗಿಯೇ ಕರೆ ಕೊಟ್ಟಿದ್ದರು.
