ರಾಮಾಯಣ ಸೃಷ್ಟಿಕರ್ತ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಖಾಸಗಿ ಚಾನೆಲ್ ವೊಂದರಲ್ಲಿ ಹೇಳಿಕೆ ನೀಡಿ ವಿವಾದವನ್ನು ಸೃಷ್ಟಿ ಮಾಡಿದ್ದ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ.
ನವದೆಹಲಿ (ಏ.04): ರಾಮಾಯಣ ಸೃಷ್ಟಿಕರ್ತ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಖಾಸಗಿ ಚಾನೆಲ್ ವೊಂದರಲ್ಲಿ ಹೇಳಿಕೆ ನೀಡಿ ವಿವಾದವನ್ನು ಸೃಷ್ಟಿ ಮಾಡಿದ್ದ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ.
ಆಕ್ಷೇಪಾರ್ಹವಾಗಿ ಹೇಳಿಕೆ ನೀಡುವುದರ ಮೂಲಕ ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿರುವುದಕ್ಕೆ ಆ ಸಮುದಾಯದವರು ದೂರು ನೀಡಿದ್ದರು. ಅದನ್ನು ಆಧರಿಸಿ ಲೂಧಿಯಾನ ಸ್ಥಳೀಯ ನ್ಯಾಯಾಲಯ ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ್ದು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ.
