ನವದೆಹಲಿ[ಡಿ.10]: ರಾಮಮಂದಿರ ನಿರ್ಮಾಣ ವಿಷಯ ಸಂಬಂಧ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಷನಲ್‌ ಕಾನ್ಫರೆನ್ಸ್‌ನ ನಾಯಕ ಫಾರುಖ್‌ ಅಬ್ದುಲ್ಲಾ, ರಾಮ ಮಂದಿರ ವಿಷಯವನ್ನಿಟ್ಟುಕೊಂಡು ಜನರನ್ನು ಬಿಜೆಪಿ ಮೂರ್ಖರನ್ನಾಗಿಸುತ್ತಿದೆ ಎಂದು ದೂರಿದ್ದಾರೆ.

ರೈತರ ಸಮಸ್ಯೆಗಳನ್ನು, ನಿರುದ್ಯೋಗದ ಸಮಸ್ಯೆಗಳನ್ನು, ದಲಿತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ನಿಜವಾದ ಸಮಸ್ಯೆಗಳ ಬಗ್ಗೆ ಹೋರಾಟ ನಡೆಯುತ್ತಿಲ್ಲ. ಆದರೆ ಬಿಜೆಪಿ ಸರ್ಕಾರ ರಾಮ ಮಂದಿರಕ್ಕಾಗಿ ಹೋರಾಟ ನಡೆಸುತ್ತಿದೆ. ಜನರನ್ನು ಮೂರ್ಖರನ್ನಾಗಿಸುವುದರ ಜೊತೆಗೆ ಕಾಶ್ಮೀರವನ್ನೂ ಹಾಳುಮಾಡುತ್ತಿದ್ದಾರೆ. ದೇಶದ ಪರಿಸ್ಥಿತಿಯನ್ನು ಸುಧಾರಿಸಲು ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಮ ಸ್ವರ್ಗದಿಂದ ಇಳಿಯುತ್ತಾನಾ? ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.