‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ದೃಢಸಂಕಲ್ಪ ಬಿಜೆಪಿ ಹೊಂದಿದೆ’. ಲೋಕಸಭಾ ಚುನಾವಣೆಗೂ ಮುನ್ನವೇ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ರಾಮ ಜನ್ಮಭೂಮಿ ನ್ಯಾಸದ ಮುಖ್ಯಸ್ಥ ರಾಮ್‌ವಿಲಾಸ್ ವೇದಾಂತಿ ಹೇಳಿದ್ದಾರೆ.

ಅಲಹಾಬಾದ್: 2019 ರ ಲೋಕಸಭಾ ಚುನಾವಣೆಗೂ ಮುನ್ನವೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ಮಾಜಿ ಬಿಜೆಪಿ ಸಂಸದ, ರಾಮ ಜನ್ಮಭೂಮಿ ನ್ಯಾಸದ ಮುಖ್ಯಸ್ಥ ರಾಮ್‌ವಿಲಾಸ್ ವೇದಾಂತಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ದೃಢಸಂಕಲ್ಪ ಬಿಜೆಪಿ ಹೊಂದಿದೆ’ ಎಂದೂ ಅವರು ಹೇಳಿದರು.

ಇತ್ತೀಚೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಇದೇ ಭರವಸೆ ನೀಡಿದ್ದರು ಎನ್ನಲಾಗಿತ್ತು. ಆದರೆ, ಅವರ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಬಿಜೆಪಿ ಬಳಿಕ ಪ್ರತಿಪಾದಿಸಿತ್ತು.