ರಾಜರಾಜೇಶ್ವರಿ ನಗರದಲ್ಲಿ  ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡನಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಇದರಿಂದ ಅವರು ಜೆಡಿಎಸ್‌ನತ್ತ ಮುಖ ಮಾಡುವ ಸಾಧ್ಯತೆ ಇದೆ.

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡನಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಇದರಿಂದ ಅವರು ಜೆಡಿಎಸ್‌ನತ್ತ ಮುಖ ಮಾಡುವ ಸಾಧ್ಯತೆ ಇದೆ.

ರಾಜರಾಜೇಶ್ವರಿ ನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಮಚಂದ್ರ ಅವರಿಗೆ ಟಿಕೆಟ್ ತಪ್ಪಿದೆ.

ರಾಜರಾಜೇಶ್ವರಿ ನಗರದಲ್ಲಿ ಮುನಿರಾಜುಗೌಡಗೆ ಟಿಕೆಟ್ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಸಂಜೆ ಈ ಸಂಬಂಧ ರಾಮಚಂದ್ರ ಅವರು ಸುದ್ದಿಗೋಷ್ಠಿ ನಡೆಸಿ ಮುಂದಿನ ನಡೆಯ ಬಗ್ಗೆ ತಿಳಿಸಲಿದ್ದಾರೆ.

 ಇನ್ನು ಇದೇ ಕ್ಷೇತ್ರದಲ್ಲಿ ನಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ರಾಮಚಂದ್ರ ಅವರು ನಟಿ ಅಮೂಲ್ಯ ಅವರ ಪತಿಯ ತಂದೆಯಾಗಿದ್ದಾರೆ.