ರೌಡಿ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ವೃತ್ತಿಪರ ಅಪರಾಧಿಗಳ ಹೆಡೆಮುರಿ ಕಟ್ಟಲು ಗೂಂಡಾ ಅಸ್ತ್ರ ಪ್ರಯೋಗಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು
ಬೆಂಗಳೂರು(ಅ.29): ರೌಡಿ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ವೃತ್ತಿಪರ ಅಪರಾಧಿಗಳ ಹೆಡೆಮುರಿ ಕಟ್ಟಲು ಗೂಂಡಾ ಅಸ್ತ್ರ ಪ್ರಯೋಗಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು
ಬೆಂಗಳೂರು ವಿಶ್ವವಿದ್ಯಾಲಯ ಸಮೀಪದ ಉಲ್ಲಾಳು ಉಪನಗರದಲ್ಲಿ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಪಶ್ಚಿಮ ಘಟಕದ ವಿವಿಧ ಕಟ್ಟಡಗಳ ಸಮುಚ್ಛಯ ನಿರ್ಮಾಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಈ ಹಿಂದೆ ಬೆಂಗಳೂರು ಹೊರ ವಲಯ ಎಂದರೆ ಅಪರಾ‘ಗಳ ತಾಣ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಗರದ ಹೊರ ವಲಯಗಳು ಆ ರೀತಿ ಉಳಿದಿಲ್ಲ ಎಂದರು. ಬೆಂಗಳೂರಿನ ಪಶ್ಚಿಮ ಭಾಗದಲ್ಲಿ ಸಿಎಆರ್ ಮೈದಾನ, ಕಚೇರಿ ಸೇರಿದಂತೆ ವಿವಿಧ ಕಟ್ಟಡಗಳು ನಿರ್ಮಾಣವಾಗುವುದರಿಂದ ಈ ಭಾಗದಲ್ಲಿ ವಾಸಿಸುವ ಜನರಿಗೆ ಹೆಚ್ಚಿನ ಭದ್ರತೆಯ ಭಾವನೆ ಮೂಡಲಿದೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ರಾಜ್ಯ ಸರಕಾರ, ಪೊಲೀಸ್ ಇಲಾಖೆ ಅತಿ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ‘ಪೊಲೀಸ್ ಸಿಬ್ಬಂದಿಗಾಗಿ 11 ಸಾವಿರ ಮನೆಗಳ ನಿರ್ಮಾಣ ಯೋಜನೆ ರೂಪಿಸಿ ಈಗಾಗಲೇ ಚಾಲನೆ ನೀಡಲಾಗಿದೆ. ಪೊಲೀಸ್ ಇಲಾಖೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಸರಕಾರ ಒದಗಿಸಲಿದೆ ಎಂದು ಸಚಿವರು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಪೊಲೀಸ್ ಗೃಹ ಮಂಡಳಿ ಮತ್ತು ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯ ಸಂಜಯ್ ಸಹಾಯ್, 21 ಎಕರೆ 34 ಗುಂಟೆ ಜಾಗದಲ್ಲಿ ಸಮುಚ್ಛಯ ನಿರ್ಮಾಣವಾಗಲಿದೆ. 10 ಕೋಟಿ ರೂ. ಮೊತ್ತದ ಯೋಜನೆಯನ್ನು 15 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಆಡಳಿತ ವಿಭಾಗ, ಸಮ್ಮೇಳನ ಸಭಾಂಗಣ, ಪೊಲೀಸ್ ವಾಹನ ಕಚೇರಿ, ಶೆಡ್, ಪರೇಡ್ ಮೈದಾನ ಸೇರಿದಂತೆ ಇನ್ನಿತರ ವಿಭಾಗಗಳು ನಿರ್ಮಾಣವಾಗಲಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ .ಟಿ ಸೋಮಶೇಖರ್, ನಾರಾಯಣಸ್ವಾಮಿ, ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತ, ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಹೆಚ್ಚುವರಿ ಪೊಲೀಸ್ ಆಯುಕ್ತ ನಂಜುಂಡಸ್ವಾಮಿ ಇನ್ನಿತರರಿದ್ದರು.
