ಬಿಜೆಪಿಯವರಿಂದಲೇ ಕಲ್ಲು ತೂರಾಟ - ಸುಳ್ಳು ಹೇಳುವ ಶಾ : ರಾಮಲಿಂಗಾ ರೆಡ್ಡಿ

Ramalinga Reddy Slams Amith Shah
Highlights

ಬೇಂಗ್ರೆ ಎಂಬಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿರಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರು : ಬೇಂಗ್ರೆ ಎಂಬಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿರಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಅಮಿತ್ ಶಾ ಅವರೇ ಸುಳ್ಳು ಹೇಳುತ್ತಾರೆ. ಹೀಗಿರುವಾಗ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿ ಸುಳ್ಳು ಹೇಳುತ್ತಿರಬಹುದು. ನಾನು ಈ ಬಗ್ಗೆ ವರದಿಯನ್ನು ತರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಮಲಿಂಗಾ ರೆಡ್ಡಿ ಹೇಳಿಕೆಗೆ ಶೆಟ್ಟರ್ ಅಸಮಾಧಾನ

ಇನ್ನು ಬೆಂಗ್ರೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅವರನ್ನು ಹೆದರಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೇ ರಾಮಲಿಂಗಾರೆಡ್ಡಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾತನಾಡುವುದು ಸರಿ ಅಲ್ಲ. ಅವರ ಕೈಯಲ್ಲಿ ಪೊಲೀಸ್ ಇಲಾಖೆ, ಗೃಹ ಇಲಾಖೆ ಇದೆ.  ವರದಿ ತರಿಸಿದರೆ ಸತ್ಯ ತಿಳಿಯುತ್ತದೆ. ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ ಎಂದಿದ್ದಾರೆ.

loader