ನಟ ಶಿವರಾಜ್ ಕುಮಾರ್ ಅವರ ಮನವಿ ಮೇರೆಗೆ ಗುರುವಾರ ಮಾನ್ಯತಾ ಟೆಕ್‌ಪಾರ್ಕ್‌ಗೆ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಅಲ್ಲಿನ ಸಂಚಾರ ಸಮಸ್ಯೆ ಬಗ್ಗೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಮನವಿ ಮೇರೆಗೆ ಗುರುವಾರ ಮಾನ್ಯತಾ ಟೆಕ್ಪಾರ್ಕ್ಗೆ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಅಲ್ಲಿನ ಸಂಚಾರ ಸಮಸ್ಯೆ ಬಗ್ಗೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಾರ್ವಜನಿಕರ ಹಾಗೂ ಕಂಪನಿಗಳ ವಾಹನ ಸಂಚಾರ ಹಿನ್ನೆಲೆಯಲ್ಲಿ ಮಾನ್ಯತಾ ಟೆಕ್ ಪಾರ್ಕ್ ಮಾರ್ಗದಲ್ಲಿ ಸ್ಥಳೀಯರಿಗೆ ತೊಂದರೆಯಾಗಿದೆ. ಅಲ್ಲದೆ, ಸಂಚಾರ ದಟ್ಟಣೆ ಪರಿಣಾಮ ವಾಯು ಮತ್ತು ಶಬ್ಧ ಮಾಲಿನ್ಯದಿಂದ ಸಹ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗಿದೆ.
ಹೀಗಾಗಿ ಸಾರ್ವಜನಿಕರ ಸಂಚಾರಕ್ಕೆ ಪ್ರತ್ಯೇಕ ಮಾರ್ಗ ಕಲ್ಪಿಸುವಂತೆ ಸಚಿವರಿಗೆ ಸ್ಥಳೀಯ ನಿವಾಸಿ ಆಗಿರುವ ನಟ ಶಿವ ರಾಜ್ಕುಮಾರ್ ಮನವಿ ಮಾಡಿದ್ದರು.
ಬೆಳಗ್ಗೆ 10.30ರ ಸುಮಾರಿಗೆ ಮಾನ್ಯತಾ ಟೆಕ್ ಪಾರ್ಕ್ಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಬಳಿಕ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಸಚಿವರ ಸ್ಪಂದನೆಗೆ ನಟ ಶಿವಣ್ಣ ಹರ್ಷ ವ್ಯಕ್ತಪಡಿಸಿದರು.
