ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಕೆಟ್ಟ ಭಾಷೆ ಬಳಸಿಲ್ಲ ಎಂದು ಸಮರ್ಥಿಸಿಕೊಂಡಿರುವ ಅರಣ್ಯ ಸಚಿವ ರಮಾನಾಥ ರೈ, ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿದ್ದರೆ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

ಗದಗ: ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಕೆಟ್ಟ ಭಾಷೆ ಬಳಸಿಲ್ಲ ಎಂದು ಸಮರ್ಥಿಸಿಕೊಂಡಿರುವ ಅರಣ್ಯ ಸಚಿವ ರಮಾನಾಥ ರೈ, ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿದ್ದರೆ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಟ್ಟ ಭಾಷೆಯಲ್ಲಿ ಮಾತನಾಡದಿದ್ದರೂ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸಿದ್ದಾರೆ. ಬಿಜೆಪಿಯವರು ಪ್ರಚಾರಕ್ಕಾಗಿ ಹೀಗೆಲ್ಲ ಸೃಷ್ಟಿ ಮಾಡುತ್ತಿದ್ದಾರೆ’ ಎಂದರು.

ಕಳೆದ ಸೆ.22ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಸೈಗೋಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಚಿವರು, ಸೂಲಿಬೆಲೆ ಬಗ್ಗೆ ವ್ಯಂಗ್ಯವಾಡಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರು ಈ ರೀತಿಯ ಪದ ಬಳಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಮುಖಂಡ ರಹೀಂ ಉಚ್ಚಿಲ್ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.