ಹಿಂದು ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರವಾಗಬೇಕಾಗುತ್ತದೆ ಎಂಬ ಬಿಎಸ್ಪಿ ನಾಯಕಿ ಮಾಯಾವತಿ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ, ದಲಿತರು ಹಿಂದು ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಿ ಎಂದು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕರೆ ನೀಡಿದ್ದಾರೆ.

ಮುಂಬೈ(ಡಿ.14): ಹಿಂದು ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರವಾಗಬೇಕಾಗುತ್ತದೆ ಎಂಬ ಬಿಎಸ್ಪಿ ನಾಯಕಿ ಮಾಯಾವತಿ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ, ದಲಿತರು ಹಿಂದು ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಿ ಎಂದು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಬುಧವಾರ ಮಾತನಾಡಿದ ಅವರು, `ದಲಿತರಿಗೆ ಹಿಂದು ಧರ್ಮದಲ್ಲಿ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅರ್ಥೈಸಿಕೊಂಡ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಸೇರಿಕೊಂಡರು.

ಅದೇ ರೀತಿ ನಾನು ಸಹ ಬೌದ್ಧ ಧರ್ಮಕ್ಕೆ ಸೇರ್ಪಡೆಯಾಗಿದ್ದೇನೆ. ಲಕ್ಷಾಂತರ ದಲಿತರು ಸಹ ಇದೇ ಮಾರ್ಗ ಅನುಸರಿಸಬೇಕು' ಎಂದು ಹೇಳಿದ್ದಾರೆ.