ನಗರದ ಪ್ರಾದೇಶಿಕ ಕಚೇರಿಗೆ ಶುಕ್ರವಾರ ಮಧ್ಯಾಹ್ನ 12ಗಂಟೆ ಸುಮಾರಿಗೆ ತೆರಳಿ ರಮೇಶ್ ಬಾಬು ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಮೇ 15ಕ್ಕೆ ಅಧಿಸೂಚನೆ ಹೊರಡಿಸಿದ್ದು, ಮೇ 22ಕ್ಕೆ ಕೊನೆಯ ದಿನಾಂಕವಾಗಿದೆ. 

ಬೆಂಗಳೂರು(ಮೇ.18): ಜೂನ್ ತಿಂಗಳಲ್ಲಿ ಅವಧಿ ಮುಗಿಯುವ ರಾಜ್ಯ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಜೆಡಿಎಸ್'ನ ರಮೇಶ್ ಬಾಬು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಗರದ ಪ್ರಾದೇಶಿಕ ಕಚೇರಿಗೆ ಶುಕ್ರವಾರ ಮಧ್ಯಾಹ್ನ 12ಗಂಟೆ ಸುಮಾರಿಗೆ ತೆರಳಿ ರಮೇಶ್ ಬಾಬು ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿ ದ್ದಾರೆ. ಮೇ 15ಕ್ಕೆ ಅಧಿಸೂಚನೆ ಹೊರಡಿಸಿದ್ದು, ಮೇ 22ಕ್ಕೆ ಕೊನೆಯ ದಿನಾಂಕವಾಗಿದೆ. ಮೇ 23ಕ್ಕೆ ನಾಮಪತ್ರಗಳ ಪರೀಶೀಲನೆ ನಡೆಯಲಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಮೇ 25 ಕೊನೆಯ ದಿನಾಂಕವಾಗಿದೆ. ಜೂ.8ರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದೆ. ಜೂ.12ರಂದು ಮತ ಎಣಿಕೆ ನಡೆಯಲಿದ್ದು, ಜೂ.15ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.