ಹುಬ್ಬಳ್ಳಿ: ಚುನಾವಣೆ ಫಲಿತಾಂಶ ಮುಗಿಯುತ್ತಿದ್ದಂತೆ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಲಿದ್ದಾರೆ. ಈ ಕುರಿತು ಅವರ ಹೇಳಿಕೆ ಮಾಧ್ಯಮಗಳಲ್ಲಿ ಬಂದಿದೆ. ಇದರಿಂದ ಮೇ 23 ರ ನಂತರ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ. 

ನಮ್ಮದು ಬರೀ 104 ಶಾಸಕರ ಬೆಂಬಲವಿದೆ. ಈ ಎರಡು ಕ್ಷೇತ್ರಗಳನ್ನು ಗೆದ್ದರೂ ಸರ್ಕಾರ ರಚಿಸುತ್ತೇವೆಯೋ ಇಲ್ಲವೋ ಎಂಬ ಅನುಮಾನವಿತ್ತು. ಅದು ಇಂದು ಕ್ಲಿಯರ್ ಆಗಿದೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಅವರಷ್ಟೇ ಅಲ್ಲದೇ ಅವರೊಂದಿಗೆ ಇನ್ನು ನಾಲ್ಕು ಶಾಸಕರು ರಾಜೀನಾಮೆ ಕೊಡುತ್ತಾರೆ ಎಂಬ ಸುದ್ದಿಯಿದೆ. ಇದು ಮಾಧ್ಯಮಗಳಲ್ಲಿ ಬಂದಿರುವುದು. ಇದರಿಂದಾಗಿ ಬಿಜೆಪಿ ಸರ್ಕಾರ ರಚನೆಗೆ ಯಾವುದೇ ಸಮಸ್ಯೆಯಾಗಲ್ಲ ಎಂದರು.