ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಮಂಡಿಸುವ ಕುರಿತಂತೆ ಮುಂದಿನ ವಾರ ಚರ್ಚೆ ಮಾಡೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಸದನದಲ್ಲಿ ಇಂದು ಖಾಸಗಿ ಆಸ್ಪತ್ರೆ ವಿಧೇಯಕ ಮಂಡನೆ ಆಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
ಬೆಳಗಾವಿ(ನ.14): ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಪಟ್ಟು ಹಿಡಿದಿರುವ ಆರೋಗ್ಯ ಸಚಿವ ರಮೇಶ್ ಕುಮಾರ್, ಒಂದು ವೇಳೆ ವಿಧೇಯಕ ಮಂಡನೆಯಾಗದಿದ್ದರೆ ನಾನು ಸಚಿವ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ
ಯಾರದ್ದೋ ಪ್ರತಿಭಟನೆಗೆ ಹೆದರಿ ವಿಧೇಯಕ ಮಂಡನೆಯಾಗದಿದ್ದರೆ ಸರಿ ಹೋಗುವುದಿಲ್ಲ. ಜನಸಾಮಾನ್ಯರನ್ನು ಗಮನದಲ್ಲಿಟ್ಟುಕೊಂಡು ವಿಧೇಯಕವನ್ನು ಸಿದ್ದಗೊಳಿಸಲಾಗಿದೆ. ಸರ್ಕಾರ ಸ್ಥಿತಿವಂತರ ಪರ ನಿಲ್ಲಬಾರದು ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಿನ್ನೆ ನಡೆದ ಸಿಎಂ ನೇತೃತ್ವದ ಸಭೆಗೂ ರಮೇಶ್ ಕುಮಾರ್ ಹಾಜರಾಗಿರಲಿಲ್ಲ. ಹಿರಿಯ ಸಚಿವ ರಮೇಶ್ ಕುಮಾರ್ ರಾಜೀನಾಮೆ ಬೆದರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಗೆಡುವಂತೆ ಮಾಡಿದೆ.