ಕಳೆದ ಹಲವು ವರ್ಷಗಳಿಂದ ಅವರಿಗೆ ಸ್ನಾಯು ತೊಂದರೆ ಇದ್ದು, ಆಗಾಗ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರಂತೆ.

ಬೆಂಗಳೂರು(ಡಿ. 04): ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಅರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಇಲ್ಲಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವರು ಜ್ವರ ಹಾಗೂ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಆಸ್ಪತ್ರೆಯ ಸಾಮಾನ್ಯ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಸುವರ್ಣನ್ಯೂಸ್'ಗೆ ನೀಡಿರುವ ಮಾಹಿತಿ ಪ್ರಕಾರ, ಬಹುತೇಕ ಇಂದೇ ರಮೇಶ್'ಕುಮಾರ್ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

ಸರಳಜೀವಿ:
ರಮೇಶ್ ಕುಮಾರ್ ಅವರು ಸರಕಾರಿ ಆಸ್ಪತ್ರೆಯ ಜನರಲ್ ವಾರ್ಡ್'ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದು ಹಲವರ ಹುಬ್ಬೇರಿಸಿದೆ. ಆದರೆ, ಇವರನ್ನ ಬಲ್ಲವರಿಗೆ ಇದರಲ್ಲಿ ಯಾವುದೇ ಅಚ್ಚರಿ ಇಲ್ಲ. ಆರೋಗ್ಯ ಸಚಿವರ ಆಪ್ತಸಹಾಯಕ ಪ್ರಸಾದ್ ಹೇಳುವ ಪ್ರಕಾರ, ರಮೇಶ್ ಕುಮಾರ್ ಅವರು ತಮಗೆ ಅನಾರೋಗ್ಯ ಬಂದಾಗೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಖಾಸಗಿ ಆಸ್ಪತ್ರೆ ಅವರು ಹೋಗುವುದೇ ಇಲ್ಲ. ಕಳೆದ ಹಲವು ವರ್ಷಗಳಿಂದ ಅವರಿಗೆ ಸ್ನಾಯು ತೊಂದರೆ ಇದ್ದು, ಆಗಾಗ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರಂತೆ.